ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು ? ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ? ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ , ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ ? ವಿವಶವಾಯಿತು ಪ್ರಾಣ ; ಹಾ ! ಪರವಶವು ನಿನ್ನೀ ಚೇತನ ; ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ ?
ನೆಟ್ಟ ಸಸಿ ಫಲ ಬರುವ ತನಕ ಶಾಂತಿಯ ತಾಳು, ಕಟ್ಟು ಬುತ್ತಿಯ ಮುಂದೆ ಉಣಲುಂಟು ತಾಳು, ಕಷ್ಟ ಬಂದರೆ ತಾಳು ಕಂಗೆಡದೆ ತಾಳು, ದುಷ್ಟ ಮನುಜರು ಪೇಳ್ವ ನಿಷ್ಟುರದ ನುಡಿ ತಾಳು, ಉಕ್ಕು ಹಾಲಿಗೆ ನೀರನಿಕ್ಕುವಂದದಿ ತಾಳು. ~ ~~ ಶ್ರೀ ವಾದಿರಾಜ ಯತಿವರ್ಯರು