ಯಾವ ಮೋಹನ ಮುರಲಿ ಕರೆಯಿತು ದೂರ ತೀರಕೆ ನಿನ್ನನು ? ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು ? ಸಪ್ತ ಸಾಗರದಾಚೆಯೆಲ್ಲೋ ಸುಪ್ತ ಸಾಗರ ಕಾದಿದೆ , ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ ? ವಿವಶವಾಯಿತು ಪ್ರಾಣ ; ಹಾ ! ಪರವಶವು ನಿನ್ನೀ ಚೇತನ ; ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೆ ಜೀವನ ?
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ